Uncategorizedಕರ್ನಾಟಕಸಿನಿಮಾ
ಅತ್ಯಾಚಾರ ಆರೋಪ; ನಟ ಮಡೆನೂರು ಮನು ಪೊಲೀಸರ ವಶಕ್ಕೆ
ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದ ಮನುವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ..

ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದ ಮನುವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.. ಅತ್ಯಾಚಾರ ಪ್ರಕರಣ ದಾಖಲಾದ ಬಳಿಕ ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ತಲೆಮರೆಸಿಕೊಂಡಿದ್ದ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಮನು ಅವರನ್ನು ಹಾಸನದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ ಬಳಿಕ ಕಾನೂನು ಪ್ರಕ್ರಿಯೆ ಮುಂದುವರಿಸಲಾಗುವುದು.