ಕರ್ನಾಟಕಜೀವನ ಶೈಲಿದೇಶಬೆಂಗಳೂರುಸಿನಿಮಾ

ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ

ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನ ಕರ್ನಾಟಕದ ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನ ಕರ್ನಾಟಕದ ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್ ನಿಂದ ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ವಿವರಿಸಲಾಗಿದೆ. ನಟಿ ತಮನ್ನಾ ಅವರನ್ನ ಮೈಸೂರು ಸ್ಯಾಂಡಲ್ ಸೋಪ್ ನ ಅಧಿಕೃತ ರಾಯಭಾರಿಯನ್ನಾಗಿ 2 ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.

ಮಿಲ್ಕಿ ಬ್ಯೂಟಿ ಎಂದೇ ಕರೆಯಲಾಗುವ ತಮನ್ನಾ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ.. ತನ್ನ ನಟನೆ ಮತ್ತು ಮೋಹಕ ನೋಟ, ಮಾದಕ ನೃತ್ಯದ ಮೂಲಕ ಕಳೆದ ಕೆಲ ವರ್ಷಗಳಿಂದ ಸಿನಿರಂಗದಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ.. ಕರ್ನಾಟಕ ಸೋಪ್ಸ್‌ ಅಂಡ್‌ ಡಿಟರ್ಜೆಂಟ್ಸ್‌ ಲಿಮಿಟೆಡ್‌ನ ಅಧಿಕೃತ ಬ್ರಾಂಡ್‌ ರಾಯಭಾರಿಯಾಗಿ ಕು. ತಮನ್ನಾ ಭಾಟಿಯ ಇವರನ್ನು 2 ವರ್ಷ ಮತ್ತು ಎರಡು ದಿನಗಳ ಅವಧಿಗೆ ರೂ.6.20 ಕೋಟಿ ವೆಚ್ಚದಲ್ಲಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker