ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಎಂದು ನಾಮಕರಣ
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಮನಗರ ಹೆಡ್ ಕ್ವಾಟ್ರಸ್ ಅದೇ ಇರುತ್ತದೆ. ಯಾವುದೆ ಬದಲಾವಣೆ ಇಲ್ಲ. ಮೂಲ ಅದು ಬೆಂಗಳೂರು ಜಿಲ್ಲೆಯಾಗಿತ್ತು. ಇಂದಿನಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಆಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಅಲ್ಲದೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿಯಮಗಳು, 1989ನ್ನು ಸಡಿಲಿಕೆ ಮಾಡಲಾಗಿದೆ. ಅದರ ಪ್ರಕಾರ, ಒಂದು ಬಾರಿಯ ಕ್ರಮವಾಗಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ಪಡೆದಿರುವ ವಿವಿಧ ಸಂಘ/ಸಂಸ್ಥೆಗಳು ಬಾಕಿ ಉಳಿಸಿಕೊಂಡಿರುವ ಸಂಪೂರ್ಣ ಗುತ್ತಿಗೆ ಮೌಲ್ಯವನ್ನು ಪ್ರಾಧಿಕಾರವು ಪ್ರಕಟಣೆ ನೀಡಿದ 120 ದಿನಗಳೊಳಗಾಗಿ ಪಾವತಿಸಿದರೆ, ನಿಯಮಾನುಸಾರ ವಿಧಿಸಲಾಗುವ ಬಡ್ಡಿಯ ಮೊತ್ತವನ್ನು ಸಂಪೂರ್ಣವಾಗಿ ಮನ್ನಾ ಮಾಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಹೇಳಿದ್ದಾರೆ.
ಇನ್ನು ರಾಮನಗರ ಹೆಸರು ಬದಲಾವಣೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷ ವಿರೋಧಿಸುತ್ತಿದ್ದು. ಹೆಸರು ಬದಲಾವಣೆಯಿಂದ ಅಭಿವೃದ್ದಿ ಆಗುವುದಿಲ್ಲ ಎಂದು ಟೀಕಿಸಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿ ಡಿಕೆ ಶಿವಕುಮಾರ್ ಅವರು ಕೆಲ ಸಮಯ ಕಾದು ನೋಡಲಿ ಎಂದು ಉತ್ತರಿಸಿದರು.