
ಬೆಳಗಾವಿ: ಜಿಲ್ಲೆಯಲ್ಲಿ ನಿರಂತರ ಮಳೆಯ ಅವಾಂತರಕ್ಕೆ ಎರಡನೆ ಬಲಿಯಾಗಿದೆ. ಮನೆಗೋಡೆ ಕುಸಿದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ,ಗೋಕಾಕ್ ನಗರದ ಮಹಲಿಂಗೇಶ್ವರ ಕಾಲೋನಿಯಲ್ಲಿ ನಡೆದಿದೆ. ಕೀರ್ತಿಕಾ ನಾಗೇಶ ಪೂಜಾರಿ (3) ಮೃತ ಬಾಲಕಿ.
ಕೋಣೆಯಲ್ಲಿ ಮಲಗಿದ್ದಾಗ ಪಕ್ಕದ ಮನೆಯ ಗೋಡೆ ನಾಗೇಶ ಪೂಜಾರಿ ಮನೆ ಮೇಲೆ ಬಿದ್ದಿದೆ. ಪರಿಣಾಮ ಘಟನೆಯಲ್ಲಿ 3 ವರ್ಷದ ಕಂದಮ್ಮ, ತಾಯಿ ರೇಷ್ಮಾ, ಸಹೋದರಿ ಖುಷಿಗೂ ಗಂಭೀರ ಗಾಯಗಳಾಗಿವೆ. ಗಾಯಾಲುಗಳನ್ನು ಗೋಕಾಕ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಪಕ್ಕದ ರೂಮಿನಲ್ಲಿ ಮಲಗಿದ್ದ ತಂದೆ-ತಾಯಿ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಗೋಕಾಕ್ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.