
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ.. 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಳೆಯಾಗುತ್ತಿದೆ. ಇದರಿಂದ ಮೇ 30ರವರೆಗೆ ಮಳೆ ಮುಂದುವರೆಯಲಿದೆ. ಮುಂದಿನ ನಾಲ್ಕು ದಿನಗಳ ವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐದು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ವಿಜಯಪುರ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಸೋಮವಾರ ಬೆಳಗ್ಗೆ ವಿರಾಜಪೇಟೆಯಲ್ಲಿ ಅತಿಹೆಚ್ಚು ಮಳೆಯಾದ ವರದಿಯಾಗಿದೆ. 27 ಸೆ.ಮೀ ಮಳೆ, ಬಾಗಮಂಡಲದಲ್ಲಿ 23 ಸೆ.ಮೀ ಹಾಗೂ ಮುಲ್ಕಿಯಲ್ಲಿ 20 ಸೆಂ.ಮೀ ಮಳೆಯಾಗಿದೆ. ಬೆಂಗಳೂರಲ್ಲಿ ಸಾಧರಣ ಮಳೆಯಾಗುತ್ತಿದೆ.