
ಕಿರುತೆರೆ ನಟ ಶ್ರೀಧರ್ ನಾಯಕ್ ಅವರು ಹಲವು ತಿಂಗಳಿಂದ ಆನಾರೋಗ್ಯದಿಂದ ಬಳತ್ತಿದ್ದು, ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ. ಕನ್ನಡ ಕಿರುತೆರೆಯಲ್ಲಿ ನಟಿಸಿ ಫೇಸಮ್ ಆಗಿದ್ದ ಶ್ರೀಧರ್ ಇನ್ಫೆಕ್ಷನ್ನಿಂದ ಬಳಲುತ್ತಿದ್ದರು. ಕಳೆದ ಆರು ತಿಂಗಳಿಂದ ಅನಾರೋಗ್ಯ ಕಾಡಿತ್ತು. ಬೆಂಗಳೂರಿನ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಹೀಗಾಗಿ ಅವರ ಚಿಕಿತ್ಸೆಗೆಂದು ಸಹಾಯ ಮಾಡುವಂತೆ ಅನೇಕರು ನಟ ನಟಿಯರು ಕೋರಿಕೊಂಡಿದ್ದರು. ಆದ್ರೆ ಗುರುತೇ ಸಿಗದಷ್ಟು ಬದಲಾಗಿ ಬೆಡ್ ಮೇಲೆ ಮಲಗಿಕೊಂಡಿದ್ದ ನಟನನ್ನು ನೋಡಿದ ಅಭಿಮಾನಿಗಳಿಗೆ ಶಾಕ್ ಎದುರಾಗಿತ್ತು. ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ಶ್ರೀಧರ್ ನಾಯಕ್ ಅವರು 40ಕ್ಕೂ ಹೆಚ್ಚು ಸೀರಿಯಲ್ಗಳಲ್ಲಿ ನಟಿಸಿದ್ದಾರೆ. 47 ವರ್ಷ ವಯಸ್ಸಿಗೆ ನಟ ಮೃತಪಟ್ಟಿರುವುದು ಅಭಿಮಾನಿಗಳಿಗೆ ಅಪಾರ ನೋವುಂಟು ಮಾಡಿದೆ.