
ಬೆಂಗಳೂರು: ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.
ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ಗೆ ಬಿಜೆಪಿ ಹೈಕಮಾಂಡ್ ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ಶೋಕಾಸ್ ನೋಟಿಸ್ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ.