
ಬೆಂಗಳೂರು: ಒಬುಲಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಶಾಸಕ ಜನಾರ್ಧನ ರೆಡ್ಡಿ ಅವರನ್ನ ಚಂಚಲಗೂಡ ಜೈಲಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.. ಬಾಡಿ ವಾರಂಟ್ ಮೇಲೆ ಜನಾರ್ದನ ರೆಡ್ಡಿ ಅವರನ್ನು ಹೈದರಾಬಾದ್ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ವಿಚಾರಣೆ ನಡೆಸಿದ ನ್ಯಾ. ಸಂತೋಷ್ ಗಜಾನನ್ ಭಟ್ ಅವರು ಜನಾರ್ದನ ರೆಡ್ಡಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡುವಂತೆ ಆದೇಶ ಪ್ರಕಟಿಸಿ ಮುಂದಿನ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿಕೆ ಮಾಡಿದರು.
ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸೇರಿದಂತೆ ಎಲ್ಲಾ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದ್ದು ಖುದ್ದು ಹಾಜರಾತಿಗೆ ಕೋರ್ಟ್ ಸೂಚಿಸಿದ್ದರಿಂದ ರೆಡ್ಡಿ ಅವರನ್ನು ಪೊಲೀಸರು ಕೋರ್ಟ್ಗೆ ಹಾಜರು ಪಡಿಸಿದ್ದರು.