
ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದ್ದು, 4ನೇ ಬಾರಿ ಫೈನಲ್ಗೆ ಲಗ್ಗೆಯಿಟ್ಟಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಕ್ವಾಲಿಫೈಯರ್-1ನಲ್ಲಿ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
2009, 2011, 2016ರ ಬಳಿಕ 4ನೇ ಬಾರಿಗೆ ಫೈನಲ್ಗೆ ಲಗ್ಗೆಯಿಟ್ಟಿರುವ ಆರ್ಸಿಬಿ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆ ಎಂದು ಕ್ರಿಕೆಟ್ ತಜ್ಞರು ಭವಿಷ್ಯ ನುಡಿದಿದ್ದಾರೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಮಾಲೀಕ ವಿಜಯ ಮಲ್ಯ, ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್ ಖಾತೆಯನ್ನು ಆರ್ಸಿಬಿ ತಂಡದ ಪರಾಕ್ರಮವನ್ನು ಕೊಂಡಾಡಿರುವ ಮಲ್ಯ ಫೈನಲ್ ಪಂದ್ಯಕ್ಕೂ ಮುನ್ನ ರಾಯಲ್ ಪಡೆಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.