
ಪಾಟ್ನಾ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಶತಕ ಸಿಡಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ಆಟಗಾರ ವೈಭವ್ ಸೂರ್ಯವಂಶಿಯವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. 14 ವರ್ಷದ ಸೆನ್ಸೇಶನ್ ವೈಭವ್ ಸೂರ್ಯವಂಶಿ ಅವರು ಐಪಿಎಲ್ನಲ್ಲಿ ತಮ್ಮ ಅನುಕರಣೀಯ ಪ್ರದರ್ಶನದ ಮೂಲಕ ಕ್ರಿಕೆಟ್ ಜಗತ್ತನ್ನು ಬೆರಗುಗೊಳಿಸಿದ್ದರು.
ಇನ್ನು ಇಂದು ವೈಭವ್ ಸೂರ್ಯವಂಶಿ ಮತ್ತು ಅವರ ಪೋಷಕರಿಗೆ ಬಿಹಾರ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತು. ಹದಿಹರೆಯದ ಬ್ಯಾಟ್ಸ್ಮನ್ ಗೌರವಾರ್ಥವಾಗಿ ಪ್ರಧಾನಿ ಮೋದಿಯವರ ಪಾದಗಳನ್ನು ಮುಟ್ಟಿದರು. ಪಾಟ್ನಾ ವಿಮಾನ ನಿಲ್ದಾಣದಲ್ಲಿ ಯುವ ಕ್ರಿಕೆಟ್ ಸೆನ್ಸೆಷನ್ ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬವನ್ನು ಭೇಟಿಯಾದೆ.
ಅವರ ಕ್ರಿಕೆಟ್ ಕೌಶಲ್ಯವನ್ನು ದೇಶಾದ್ಯಂತ ಪ್ರಶಂಸಿಸಲಾಗುತ್ತಿದೆ. ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭಾಶಯಗಳು ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಬರೆದು, ವೈಭವ್ ಮತ್ತು ಅವರ ಪೋಷಕರೊಂದಿಗಿನ ಕೆಲವು ಚಿತ್ರಗಳೊಂದಿಗೆ ಪೋಸ್ಟ್ ಮಾಡಿದ್ದಾರೆ. ಇದಕ್ಕೂ ಮೊದಲು, ತಮ್ಮ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು ಯುವ ಕ್ರಿಕೆಟಿಗನನ್ನು ಐಪಿಎಲ್ನಲ್ಲಿನ ಅವರ ಆಟವನ್ನು ಶ್ಲಾಘಿಸಿದ್ದರು.