
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜೊತೆಗೆ ಕಡಲಬ್ಬರ ಕೂಡ ಜೋರಾಗಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ನಾಡದೋಣಿ ಮುಗುಚಿ ಇಬ್ಬರು ಮೀನುಗಾರರು ನೀರುಪಾಲಾಗಿರುವ ಘಟನೆ, ಮಂಗಳೂರು ಕಡಲತೀರದ ತೋಟಬೆಂಗ್ರೆ ಅವಳಿ ಬಾಗಿಲ ಬಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ ಮೀನುಗಾರಿಕೆಗೆ ನಿರ್ಭಂದಿಸಿದೆ. ಆದರೆ, ನಿಯಮ ಮೀರಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನೀರುಪಾಲಾಗಿದ್ದಾರೆ. ತೋಟಬೆಂಗ್ರೆ ನಿವಾಸಿಗಳಾದ ಯಶವಂತ್ ಮತ್ತು ಕಮಲಾಕ್ಷ ನೀರುಪಾಲಾದವರು. ಮೀನುಗಾರರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.