
ರಾಜ್ಯದ ಹಲವು ಕಡೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.. ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬಳ್ಳಾರಿ PWD ಸುಪರಿಡೆಂಟ್ ಇಂಜಿನಿಯರ್ ಅಮೀನ್ ಮುಕ್ತಾರ್ ಮನೆ ಮೇಲೆ ದಾಳಿ ದಾಳಿ ಮಾಡುವ ವೇಳೆ ಕೋಟಿ ಕೋಟಿ ರೂ.ಮೌಲ್ಯದ ಆಸ್ತಿ ಪತ್ರ ಪತ್ತೆಯಾಗಿದೆ. ಕಲಬುರಗಿ ಹೊರವಲಯದಲ್ಲಿ 25 ಏಕರೆ ಜಮೀನಿನ ಆಸ್ತಿ ಪತ್ರ, ಕಲಬುರಗಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಪೆಟ್ರೋಲ್ ಬಂಕ್, ಒಂದು ಕ್ರಶರ್ ಮಷೀನ್ ಲೈಸನ್ಸ್ ಸೇರಿದಂತೆ ಇತರೆ ಆಸ್ತಿ ಪತ್ರಗಳು ಪತ್ತೆಯಾಗಿವೆ.
ಧಾರವಾಡದಲ್ಲಿಯೂ ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನೀಯರ್ ಎಚ್. ಸುರೇಶ ಮನೆ ಹಾಗೂ ಸರಕಾರಿ ಕ್ವಾರ್ಟರ್ಸ್ ಮೇಲೆ ದಾಳಿಯಾಗಿದೆ. ಧಾರವಾಡದ ಡಿಸಿ ಕಾಂಪೌಂಡ್‌ನಲ್ಲಿರೋ ಕಚೇರಿ, ಕೆಸಿಡಿ ವೃತ್ತದ ಬಳಿಯ ಮನೆ ಮೇಲೆ ದಾಳಿ ಮಾಡಿ, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮದ ಗ್ರಾಮ ಪಂಚಾಯತಿ ಪಿಡಿಓ ಕಚೇರಿ ಮತ್ತು ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆದಿದೆ. ರಾಮಕೃಷ್ಣಪ್ಪ ಗುಡಗೇರಿ ಗ್ರಾಮ ಪಂಚಾಯತಿ ಅಧಿಕಾರಿ ಕಚೇರಿ ಮತ್ತು ಧಾರವಾಡದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆ ಡಿಸಿ ಕಚೇರಿ ಲೆಕ್ಕಪತ್ರ ವಿಭಾಗದ ಪ್ರಥಮ ದರ್ಜೆ ಸಹಾಯಕ ಶ್ರೀಶೈಲ್ ತತ್ರಾಣಿ ಅವರ ಅಮೀನಗಢ ಪಟ್ಟಣದಲ್ಲಿರುವ ಶ್ರೀಶೈಲ್ ತತ್ರಾಣಿ ಅವರ ಮನೆ ಹಾಗೂ ಜ್ಯುವೆಲ್ಲರಿ ಶಾಪ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಾಗಲಕೋಟೆ ಲೋಕಾಯುಕ್ತ DySP ನೇತೃತ್ವದಲ್ಲಿ ಸಿದ್ದೇಶ್ವರ ನೇತೃತ್ವದಲ್ಲಿ ದಾಳಿಯಾಗಿದೆ.
ಇನ್ನು ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಅರೋಪ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ವಿಭಾಗದ ಅಕೌಂಟ್ ಆಫಿಸರ್ ಗಿರೀಶ್ ರಾವ್ ಮೆನೆ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ಮಂಜಿನಾಥ ನೇತೃತ್ವದಲ್ಲಿ ದಾಳಿ ನಡೆದಿದೆ.