ಕರ್ನಾಟಕHomeಜಿಲ್ಲೆಮೈಸೂರುಸುದ್ದಿ

ಚಿನ್ನ ಕದ್ದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಬರ್ಬರ ಹತ್ಯೆ

ಚಿನ್ನ ಕದ್ದು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು: ಚಿನ್ನ ಕದ್ದು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಏ.18 ರಂದು ಚಾಮರಾಜನಗರ ಜಿಲ್ಲೆ ಬ್ಯಾಡರಪುರದ ಮೋಹನ್ ಕುಮಾರ್ (31) ಕೊಲೆ ನೆಡೆದಿದ್ದು, 60 ಗ್ರಾಂ ಚಿನ್ನಕ್ಕಾಗಿ ಯುವಕನನ್ನು ಕಾರಿನಲ್ಲೇ ಹೊಡೆದು ಹತ್ಯೆ ಮಾಡಿದ ಆರೋಪಿಗಳು ಶವ ಸುಟ್ಟು ಹಾಕಿದ್ದರು. ಈ ಕೊಲೆಯಲ್ಲಿ ಭಾಗಿಯಾದ ನಾಲ್ವರು ಆರೋಪಿಗಳನ್ನು ಮೈಸೂರು ಜಿಲ್ಲಾ ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ಎಸ್ಕೇಪ್ ಆಗಿದ್ದಾನೆ.

ಮೋಹನ್ ಕುಮಾರ್ ಕೊಲೆ ಕೇಸ್‌ನಲ್ಲಿ ಮೈಸೂರು ಮೂಲದ ಶ್ರೀನಿವಾಸ್ ಪ್ರಮುಖ ಆರೋಪಿಯಾಗಿದ್ದು, ಪ್ರಜ್ವಲ್, ಚಂದು, ಕಬೀರ್ ಕಾಳಯ್ಯ, ದರ್ಶನ್ ಬಂಧನವಾಗಿದೆ. ಹತ್ಯೆಯಾದ ಮೋಹನ್ ಕುಮಾರ್ ಬೋಗಾದಿ ಲಾಡ್ಜ್ ಒಂದರಲ್ಲಿ ಮ್ಯಾನೇಜರ್ ಆಗಿದ್ದ. ಲಾಡ್ಜ್ನಲ್ಲಿ ಇಸ್ಪೀಟ್ ಆಟವಾಡಲು ಕೊಲೆ ಆರೋಪಿ ಶ್ರೀನಿವಾಸ್ ಬರುತ್ತಿದ್ದ. ಶ್ರೀನಿವಾಸ್ ಜೂಜಿಗಾಗಿ ಪತ್ನಿಯ 60 ಗ್ರಾಂ ಚಿನ್ನದ ಸರ ತಂದಿದ್ದ. ಅವತ್ತು ಹುಣ್ಣಿಮೆ ಕಾರಣ ಮಾರವಾಡಿ ಅಂಗಡಿಯವನು ಗಿರವಿ ಇಟ್ಟುಕೊಳ್ಳಲ್ಲ ಎಂದಿದ್ದ. ಬಳಿಕ ಶ್ರೀನಿವಾಸ್ ಲಾಡ್ಜ್ನ ರೂಂನ ಹಾಸಿಗೆ ದಿಂಬಿನ ಕೆಳಗೆ ಚಿನ್ನದ ಸರ ಇಟ್ಟಿದ್ದ. ಇದೇ ವೇಳೆ ಮೋಹನ್ ಕುಮಾರ್ ಚಿನ್ನದ ಸರ ಕಳವು ಮಾಡಿದ್ದ.

ಕಳವಿನ ಬಗ್ಗೆ ತಿಳಿದ ಶ್ರೀನಿವಾಸ್, ತನ್ನ ಗೆಳೆಯರಾದ ಪ್ರಜ್ವಲ್, ಚಂದು, ಕಬೀರ್ ಕಾಳಯ್ಯ ಮತ್ತು ದರ್ಶನ್ ಜೊತೆ ಗ್ಯಾಂಗ್ ಕಟ್ಟಿಕೊಂಡು, ಮೋಹನ್ ಕುಮಾರ್‌ನನ್ನು ಮನೆಯಿಂದ ಕರೆಸಿ ಕಾರಿನಲ್ಲಿ ಕರೆದೊಯ್ದು ಹತ್ಯೆ ಮಾಡಿದ. ಆರೋಪಿಗಳು ಯಾರಿಗೂ ತಿಳಿಯದಂತೆ ಮೈಸೂರು ತಾಲೂಕಿನ ಗುಮಚನಹಳ್ಳಿ ಬಳಿ ಹಾಡಹಗಲೇ ಶವವನ್ನು ಸುಟ್ಟುಹಾಕಿದ್ದರು. ಸರಸ್ವತಿಪುರಂ ಠಾಣೆಯಲ್ಲಿ ಚಿನ್ನ ಕಳವಿನ ಕೇಸ್ ದಾಖಲಾಗಿತ್ತು. ಜಯಪುರ ಠಾಣೆ ಪೊಲೀಸರು ಈ ಕೊಲೆ ಪ್ರಕರಣವನ್ನು ತನಿಖೆ ನಡೆಸಿದಾಗ, ಕೊಲೆಯ ರಹಸ್ಯ ಬಯಲಾಗಿದೆ. ತನಿಖೆಯ ಸಂದರ್ಭದಲ್ಲಿ ಪೊಲೀಸರು ನಾಲ್ವರು ಆರೋಪಿಗಳಾದ ಪ್ರಜ್ವಲ್, ಚಂದು, ಕಬೀರ್ ಕಾಳಯ್ಯ ಮತ್ತು ದರ್ಶನ್‌ರನ್ನು ಬಂಧಿಸಿದ್ದಾರೆ.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker