ಕ್ರೀಡೆHomeಕರ್ನಾಟಕದೇಶಸುದ್ದಿ

ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಗ್ಲೆನ್‌ ಮ್ಯಾಕ್ಸ್‌ ವೆಲ್‌

ಆಸ್ಟ್ರೇಲಿಯಾ ತಂಡದ ಸ್ಟಾರ್‌ ಆಟಗಾರ ಗ್ಲೆನ್‌ ಮ್ಯಾಕ್ಸ್‌ ವೆಲ್‌ ಅವರು ಏಕದಿನ ಕ್ರಿಕೆಟ್‌ ಮಾದರಿಗೆ ವಿದಾಯ ಘೋಷಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಸ್ಟಾರ್‌ ಆಟಗಾರ ಗ್ಲೆನ್‌ ಮ್ಯಾಕ್ಸ್‌ ವೆಲ್‌ ಅವರು ಏಕದಿನ ಕ್ರಿಕೆಟ್‌ ಮಾದರಿಗೆ ವಿದಾಯ ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಮ್ಯಾಕ್ಸ್‌ವೆಲ್‌ ಅವರು ಟಿ20 ತಂಡದ ಭಾಗವಾಗಿ ಮಾತ್ರ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. 2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಮ್ಯಾಕ್ಸ್​ವೆಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದಾಗ್ಯೂ ಅವರು ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಕೊನೆಯ ಬಾರಿಗೆ ಮ್ಯಾಕ್ಸ್‌ವೆಲ್‌ ಟೆಸ್ಟ್‌ ಆಡಿದ್ದು 2017 ರಲ್ಲಿ. ನಂತರ ಅವರು ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆ ಆಗಿಲ್ಲ. ಒಟ್ಟು 149 ಏಕದಿನ ಪಂದ್ಯವಾಡಿರುವ ಮ್ಯಾಕ್ಸ್‌ವೆಲ್‌ 136 ಇನ್ನಿಂಗ್ಸ್‌ಗಳಿಂದ 33.81 ಸರಾಸರಿಯಲ್ಲಿ 3,990 ರನ್‌ ಹೊಡೆದಿದ್ದಾರೆ. ಈ ಆಟದಲ್ಲಿ 4 ಶತಕ, 23 ಅರ್ಧಶತಕ ಬಾರಿಸಿದ್ದಾರೆ. 77 ವಿಕೆಟ್‌ ಪಡೆದಿದ್ದಾರೆ.

ಮ್ಯಾಕ್ಸ್‌ವೆಲ್ ಇತ್ತೀಚೆಗೆ ಬೆರಳಿನ ಗಾಯದಿಂದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ನಿಂದ ಹೊರಗುಳಿಯುವ ಮೊದಲೇ ಏಕದಿನ ಪಂದ್ಯಗಳಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೆ ಎಂದು ಹೇಳಿದರು. ಕಿರಿಯ ಆಟಗಾರರು 2027 ರ ವಿಶ್ವಕಪ್‌ಗೆ ತಯಾರಿ ನಡೆಸಬೇಕಾದ ಸಮಯ ಬಂದಿದೆ ಎಂದು ಅವರು ಉಲ್ಲೇಖಿಸಿದರು.

2012ರಲ್ಲಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಮ್ಯಾಕ್ಸ್‌ವೆಲ್ ಅವರ ಸ್ಪೋಟಕ ಬ್ಯಾಟಿಂಗ್ ನಿಂದ ಹೆಸರು ಮಾಡಿದ್ದಾರೆ. 2023ರ ಏಕದಿನ ವಿಶ್ವಕಪ್ ನ ಅಫ್ಘಾನ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದರೂ ಸೋಲುವ ಸಂದರ್ಭದಿಂದ ತಂಡವನ್ನು ಮೇಲಕ್ಕೆತ್ತಿದ್ದರು. ಒಂದು ಕಾಲಿನಲ್ಲಿ ನಿಂತು ಆಟವಾಡಿ ಅಜೇಯ ದ್ವಿಶತಕ ಬಾರಿಸಿದ್ದರು. ಇದು ಏಕದಿನ ಕ್ರಿಕೆಟ್ ಇತಿಹಾಸದ ಅತ್ಯುನ್ನತ ಇನ್ನಿಂಗ್ಸ್ ಗಳಲ್ಲಿ ಒಂದಾಗಿದೆ.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker