ಕಲಬುರಗಿ ಜಿಲ್ಲೆಯ ಶಹಬಾದ್ಗೆ ಪುತ್ತಿಲ ಗಡಿಪಾರು
ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ.

ದಕ್ಷಿಣ ಕನ್ನಡ: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಪೊಲೀಸರು ಇದೀಗ ಹಿಂದೂ ಮುಖಂಡರು ಹಾಗೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ:58ರಡಿ ನೋಟೀಸ್ ಜಾರಿ ಮಾಡಲಾಗಿದೆ. ಅಲ್ಲದೇ ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ. ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.