
ತೆರೆದ ವಾಹನದಲ್ಲಿ RCB ಆಟಗಾರರ ಮೆರವಣಿಗೆ ಇರುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ. ಆರ್ಸಿಬಿ ತಂಡದ ಗೆಲುವಿಗೆ ಕರ್ನಾಟಕ ಸರ್ಕಾರ ಅಭಿನಂದನೆ ಸಲ್ಲಿಸಲಿದೆ. ಆದರೆ, ಭದ್ರತಾ ಕಾರಣಗಳಿಂದ ತೆರೆದ ವಾಹನದಲ್ಲಿ ಮೆರವಣಿಗೆ ನಡೆಯುವುದಿಲ್ಲ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ಆರ್ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲ ಆಟಗಾರರು ಬಸ್ನಲ್ಲಿ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.