
ಬೆಂಗಳೂರು :RCB ವಿಜಯೋತ್ಸವಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘೋರ ದುರಂತ ಸಂಭವಿಸಿದೆ. ಸ್ಟೇಡಿಯಂ ಒಳಗೆ ಪ್ರವೇಶಿಸಲು ಲಕ್ಷಾಂತರ ಅಭಿಮಾನಿಗಳು ಒಂದೇ ಬಾರಿಗೆ ಆಗಮಿಸಿದ್ದಾರೆ. ಲಕ್ಷ, ಲಕ್ಷ ಆಭಿಮಾನಿಗಳ ಮಧ್ಯೆ ನೂಕುನುಗ್ಗಲು ನಡೆದಿದ್ದು, ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಿದೆ.
18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ ಏಳು ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.