ಕರ್ನಾಟಕHomeಕ್ರೀಡೆಜಿಲ್ಲೆದೇಶಸುದ್ದಿ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ ಡಿಕೆಶಿ ಕಣ್ಣೀರು

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿರುವ ದುರಂತದಲ್ಲಿ ಉಂಟಾದ ಸಾವು-ನೋವು ನೆನೆದು ಡಿಸಿಎಂ ಡಿಕೆ ಶಿವಕುಮಾರ್‌ ಕಣ್ಣೀರಿಟ್ಟಿದ್ದಾರೆ.

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿರುವ ದುರಂತದಲ್ಲಿ ಉಂಟಾದ ಸಾವು-ನೋವು ನೆನೆದು ಡಿಸಿಎಂ ಡಿಕೆ ಶಿವಕುಮಾರ್‌ ಕಣ್ಣೀರಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಅವರು, ನನಗೆ ಹೊಟ್ಟೆ ಉರಿಯುತ್ತಿದೆ, ಆ ಮಕ್ಕಳ ತಾಯಿ ಮಾತನಾಡೋದನ್ನ ಸಹಿಸೋಕೆ ಆಗ್ತಾ ಇಲ್ಲ ಅಂತ ಕಣ್ಣೀರು ಹಾಕಿದ್ರು.

14, 15 ವರ್ಷದ ಮಕ್ಕಳು ಘಟನೆಯಲ್ಲಿ ಪ್ರಾಣ ಕಳೆದುಕೊಂಡಿರೋದು ನಾನು ನೋಡಿದೆ. 10 ಜನರನ್ನು ನೋಡಿದ್ದೇನೆ. ಈ ರೀತಿ ಆಗಬಾರದಿತ್ತು. ಇದನ್ನ ಯಾವ ಫ್ಯಾಮಿಲಿ ಕೂಡ ತಡೆದುಕೊಳ್ಳಲ್ಲ. ಪೊಲೀಸ್ ಇಲಾಖೆ ಕೂಡಲೇ ಹೇಳ್ತು ಇದನ್ನ ತಡೆಯಿರಿ ಅಂತ. ನಾನೂ ಕೂಡಲೇ ಮ್ಯಾನೇಜ್ಮೆಂಟ್‌ಗೆ ಹೇಳಿದೆ, ಅವರು ಹೋಗೋದಕ್ಕೂ ಕೂಡ ಜಾಗ ಇರಲಿಲ್ಲ. ಕೂಡಲೇ ಅವರನ್ನ ನಾನು ಕಾರ್‌ನಲ್ಲಿ ಕೂರಿಸಿಕೊಂಡು ಹೋದೆ, ಮಾಧ್ಯದವರು ಹೇಳಿದ ಬಳಿಕವೇ ನಮಗೆ ಗೊತ್ತಾಯ್ತು ಎಂದು ತಿಳಿಸಿದ್ರು.

ಯಾರು ಏನೇ ಹೇಳಿದರೂ ಟೀಕೆ ಮಾಡಲಿ, ಸದನದಲ್ಲಿ ಎಲ್ಲವೂ ಬರಲಿದೆ. ಅವರವರ ಕಾಲದಲ್ಲಿ ಏನಾಯ್ತು ಅಂತ ಗೊತ್ತಿದೆ. ರಾಜ್ ಕುಮಾರ್ ಸತ್ತಾಗ ಏನಾಯ್ತು ಅಂತ ಗೊತ್ತಿದೆ. ನಾನು ಆಗ ದೆಹಲಿಯಲ್ಲಿ ಇದ್ದೆ, ಕುಮಾರಸ್ವಾಮಿ ಟೀಕೆ ಮಾಡುತ್ತಲೇ ಇರಲಿ. ಡರ್ಟಿ ಪಾಲಿಟಿಕ್ಸ್ ನಾನು ಮಾತಾಡಲ್ಲ. ಹೌದು ಯಾರೇ ಮಾಡಿದರೂ ಕೂಡ ಸರ್ಕಾರ ಜವಬ್ದಾರಿ ತೆಗೆದುಕೊಳ್ಳುತ್ತದೆ. ಇದು ಕರ್ನಾಟಕದ ಇಮೇಜ್‌, ನಮ್ಮ ಮನಸ್ಸಿಗೆ, ನಮ್ಮ ಕುಟುಂಬಕ್ಕೂ ನೋವಾಗಿದೆ. ಒಬ್ಬರು ತಾಯಿ ಹೇಳ್ತಾರೆ ಪೋಸ್ಟ್ ಮಾರ್ಟಮ್ ಮಾಡಬೇಡಿ ಅಂತ, ಎಷ್ಟು ಹೊಟ್ಟೆ ಉರಿಯಬೇಕು ಅಲ್ವ? ಈ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ ಅಂತ ಕಣ್ಣೀರಿಟ್ಟಿದ್ದಾರೆ.

ಇನ್ನು ಇವರು ಸಾವಿನ ಮೇಲೆಯೇ ರಾಜಕೀಯ ಮಾಡೋದು. ಬಿಜೆಪಿ, ಜೆಡಿಎಸ್‌ನ ಪೊಲಿಟಿಕಲ್ ಅಜೆಂಡಾನೇ ಅದು, 18 ವರ್ಷದ ಬಳಿಕ ಕಪ್ ಬಂದಿದೆ ಅಂದಾಗ ಸಹಜವಾಗಿ ಅಭಿಮಾನ ಇರುತ್ತದೆ. ಸಿಎಂ, ಗೃಹ ಸಚಿವರು, ಸರ್ಕಾರ ಶಾಕ್ ನಲ್ಲಿ ಇದೆ. ಇಷ್ಟು ದೊಡ್ಡ ಘಟನೆ ಆಗುತ್ತೆ ಅಂತ ಅಂದುಕೊಂಡೇ ಇರಲಿಲ್ಲ. ಈ ಪ್ರಕರಣ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ನಾನು ಪೊಲಿಟಿಕಲ್ ಬಗ್ಗೆ, ವಿಪಕ್ಷದ ಟೀಕೆಗೆ ಮಾತನಾಡಲ್ಲ. ನಾನು ಜನರಿಗೆ ಮಾತ್ರ ಉತ್ತರ ಕೊಡ್ತೀನಿ. ಇವರೆಲ್ಲಾ ಪಾಲಿಟಿಕ್ಸ್ ಮಾಡೋ ಮಾಸ್ಟರ್ ಮೈಂಡ್ಸ್ ಅಷ್ಟೆ ಅಂತ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker