
ಬೆಂಗಳೂರಿನಲ್ಲಿ ನಡೆದ RCB ವಿಜಯೋತ್ಸವದಲ್ಲಿ 11 ಜನರು ಬಲಿಯಾಗಿದ್ದರು. ಈ ಅವಘಡದಲ್ಲಿ ಸಾವಿಗೀಡದವರ ಕುಟುಂಬಳಿಗೆ ಆರ್ಸಿಬಿ ಫ್ರಾಂಚೈಸಿ ಪರಿಹಾರ ಘೋಷಿಸಿದ್ದು. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದೆ.
ಈ ಕುರಿತು ಆರ್ಸಿಬಿ ಟ್ವಿಟ್ ಮಾಡಿದ್ದು, ಇದರಲ್ಲಿ ನಿನ್ನೆ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ, ಈ ಘಟನೆ ಆರ್ಸಿಬಿ ಕುಟುಂಬಕ್ಕೆ ಬಹಳ ನೋವುಂಟು ಮಾಡಿದೆ. ಮೃತಪಟ್ಟ ಆರ್ಸಿಬಿ ಅಭಿಮಾನಿಗಳ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ಸಂದರ್ಭದಲ್ಲಿ, ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರಯತ್ನಿಸುವಾಗ ಕಾಲ್ತುಳಿತ ಸಂಭವಿಸಿತು, ಇದರಲ್ಲಿ 11 ಅಭಿಮಾನಿಗಳು ಪ್ರಾಣ ಕಳೆದುಕೊಂಡರೆ, 20 ಕ್ಕೂ ಹೆಚ್ಚು ಅಭಿಮಾನಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.