
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದ 11 ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ಮುಂಬೈಗೆ ತೆರಳುತ್ತಿದ್ದ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್ಎ ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಬಂಧಿತರಾಗಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ನಡೆಸಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ.