
ಬೆಳಗಾವಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿದ್ದು, ಈ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬದವರಿಗೆ ಕೆಎಸ್ಸಿಎ ಹಾಗೂ ಆರ್ಸಿಬಿ ಮ್ಯಾನೇಜ್ಮೆಂಟ್ ವತಿಯಿಂದ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಸಿದ್ದಾರೆ..
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಇನ್ನೂ ಹೆಚ್ಚಿನ ಪರಿಹಾರ ಕೊಡಬೇಕು ಅಂತಾ ನಾನು ಕೂಡ ಒತ್ತಾಯ ಮಾಡ್ತೀನಿ. ಸರ್ಕಾರ ಅಷ್ಟೇ ಅಲ್ಲ ಆರ್ಸಿಬಿ ಫ್ರಾಂಚೈಸಿ, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅವರೂ ಕೊಡಬೇಕು. ಬರೀ ಹತ್ತು ಲಕ್ಷ ಅಲ್ಲ ಒಂದೊಂದು ಕೋಟಿ ಪರಿಹಾರ ಕೊಡಬೇಕು ಅಂತ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಎಷ್ಟೇ ಪರಿಹಾರ ಕೊಟ್ರೂ ಸತ್ತ ಜೀವ ವಾಪಸ್ ತರಲು ಆಗಲ್ಲ. ವಿಪಕ್ಷದವರು ಜನರ ದಿಕ್ಕು ತಪ್ಪಿಸಲು ಏನು ಮಾಡಬೇಕೋ ಅದನ್ನ ಮಾಡ್ತಾರೆ. ನಮ್ಮ ಹಿರಿಯರು ಏನೇನೋ ಉತ್ತರ ಕೊಡಬೇಕು ಕೊಡ್ತಾರೆ. ಘಟನೆಯಲ್ಲಿ ಇಂಟಲಿಜೆನ್ಸ್ ತಪ್ಪಾಗಿದ್ರೇ ತನಿಖೆಯಿಂದ ಗೊತ್ತಾಗುತ್ತೆ ಅಂತ ಹೇಳಿದ್ದಾರೆ.