
ಬೆಂಗಳೂರು: ಆರ್ಸಿಬಿ ಗೆದ್ದ ಸಂಭ್ರಮದಲ್ಲಿ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ 11 ಜನ ಉಸಿರು ಗಟ್ಟಿ ಸತ್ತು ಹೋಗಿದ್ದರು. ಪ್ರಕರಣ ಸಂಬಂಧ ಹೈಕಮಾಂಡ್ ಬುಲಾವ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಒಟ್ಟಿಗೆ ಒಂದೇ ವಿಮಾನದಲ್ಲಿ ಸಿಎಂ ಹಾಗೂ ಡಿಕೆಶಿ ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ತೆರಳಿರುವ ಸಿಎಂ ಹಾಗೂ ಡಿಸಿಎಂ ಜಂಟಿಯಾಗಿ ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಸಿಎಂ ಹಾಗೂ ಡಿಸಿಎಂ ಜಂಟಿಯಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಕಾಲ್ತುಳಿತದ ಬಗ್ಗೆ ವರದಿ ನೀಡಲಿದ್ದಾರೆ.