
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆ ಅಹಮದಾಬಾದ್ನ ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ.
ಈ ವಿಮಾನ ನಿಲ್ದಾಣದ ಆವರಣದಿಂದ ದಟ್ಟ ಹೊಗೆ ಹೊರಬರುತ್ತಿರುವುದನ್ನು ನೋಡಬಹುದು. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಹಲವಾರು ಸಾವುನೋವುಗಳ ಭೀತಿ ಎದುರಾಗಿದೆ. ಆದರೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಇಂದು ಮಧ್ಯಾಹ್ನ ಗುಜರಾತ್ನ ಅಹಮದಾಬಾದ್ನ ಮೇಘನಿ ನಗರ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಈ ವಿಮಾನ ಅಹಮದಾಬಾದ್ನಿಂದ ಲಂಡನ್ಗೆ ಹೋಗುತ್ತಿತ್ತು. ವಿಮಾನದೊಳಗಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ.