
ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದ್ದು, 230 ಪ್ರಯಾಣಿಕರು ಮತ್ತು 12 ಸಿಬ್ಬಂದಿಯೊಂದಿಗೆ ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI-171 ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ.
ದುರಂತಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತ ನಮ್ಮನ್ನು ದಿಗ್ಭ್ರಮೆಗೊಳಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕ ಘಟನೆ. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವ ಬಗ್ಗೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.