ಕರ್ನಾಟಕಜೀವನ ಶೈಲಿದೇಶಬೆಂಗಳೂರುಸುದ್ದಿ

ಆ ಒಂದು ಫೋನ್‌ ಕಾಲ್‌ನಿಂದ ಮುರಿದು ಬಿದ್ದ ಮದುವೆ

ವರ ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಮದುವೆ ಬೇಡ ಎಂದು ವಧು ಎಲ್ಲರಿಗೂ ಶಾಕ್​ ನೀಡಿದ ಘಟನೆ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ.

ಹಾಸನ: ವರ ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಮದುವೆ ಬೇಡ ಎಂದು ವಧು ಎಲ್ಲರಿಗೂ ಶಾಕ್​ ನೀಡಿದ ಘಟನೆ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆಂದು ವಧು ಮದುವೆನಿರಾಕರಿಸಿದ್ದಾರೆ.

ಹಾಸನ ತಾಲೂಕಿನ ಬೂವನಹಳ್ಳಿ ಗ್ರಾಮದ ಯುವತಿ ಹಾಗೂ ಆಲೂರು ತಾಲೂಕಿನ ಯುವಕನ ಜೊತೆ ಮದುವೆ ನಿಶ್ಚಯವಾಗಿತ್ತು. ಕುಟುಂಬಸ್ಥರು, ಬಂಧು ಮಿತ್ರರು ಹಾಗೂ ಸಂಬಂಧಿಕರು ಖುಷಿ ಖುಷಿಯಾಗಿ ಮದುವೆಯಲ್ಲಿ ಓಡಾಡುತ್ತಿದ್ದರು. ಆದ್ರೇ ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಯುವತಿಗೆ ಕರೆಯೊಂದು ಬಂದಿದೆ.

ಆ ಕೂಡಲೇ ಮದುವೆ ಬೇಡ ಎಂದು ಯುವತಿ ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾಳೆ. ಆದ್ರೆ ಯುವತಿ ಹೀಗೆ ಮಾಡಿದಕ್ಕೆ ಒಂದು ಕಾರಣ ಕೂಡ ಇದೆ. ಅದು ಏನೆಂದರೆ ಯುವತಿ ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದಳಂತೆ. ಹೀಗಾಗಿ ತಾಳಿ ಕಟ್ಟಲು ಬಂದ ವರನ ಹತ್ತಿರ ನನಗೆ ಈ ಮದುವೆ ಬೇಡ ಎಂದು ಹಠ ಹಿಡಿದಿದ್ದಾಳೆ. ಇನ್ನೂ, ಮದುವೆ ಬೇಡವೇ ಬೇಡ ಎಂದು ಹಠ ಹಿಡಿದ ಯುವತಿಯನ್ನು ನೋಡಿದ ವರ ನನಗೂ ಬೇಡ ಅಂತ ಹೇಳಿದ್ದಾರೆ. ಮಗಳು ಮದುವೆ ಬೇಡ ಎಂದಿದ್ದಕ್ಕೆ ಪೋಷಕರು ಕಣ್ಣೀರಿಟ್ಟಿದ್ದಾರೆ. ಆಗ ಬಡಾವಣೆ ಹಾಗೂ ನಗರ ಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿದ್ದಾರೆ.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker