
ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ಲಂಡನ್ಗೆ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದ್ದು, ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮೇಘಾನಿ ಪ್ರದೇಶ ಮೆಡಿಕಲ್ ಕಾಲೇಜ್ವೊಂದರ ಮೇಲೆ ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಈ ಸುದ್ದಿ ತಿಳಿದು ತುಂಬಾ ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ, ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಇದೇ ವಿಷಯಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಸಿದ್ದು, ಅಹಮದಾಬಾದ್ ವಿಮಾನ ಪತನ ದುರದುಷ್ಟಕರ ಘಟನೆಯಾಗಿದೆ ಎಂದು ಹೇಳಿದ್ದಾರೆ. ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನ ಆಗಿದೆ. ಈ ಘಟನೆ ನಡೆದಿರುವುದು ನನಗೆ ಆಶ್ಚರ್ಯ ತರಿಸಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ವಿಮಾನಗಳು ಉತ್ತಮವಾಗಿ ಸಂಚಾರ ಆಗ್ತಿತ್ತು. ನಾನು ಕೆಲ ದೃಶ್ಯಗಳನ್ನ ನೋಡಿದ್ದೇನೆ. ಬೆಂಕಿ ಹತ್ತಿಕೊಂಡು ಉರಿಯುತ್ತಿತ್ತು ಎಂದಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.