ದೇಶಕರ್ನಾಟಕಜಿಲ್ಲೆಸುದ್ದಿ

ರಾಜ್ಯ ತೋತಾಪುರಿ ಮಾವುಗೆ ನಿರ್ಬಂಧ ಹೇರಿದ ಆಂಧ್ರ- ಸಿಎಂ ಚಂದ್ರಬಾಬು ನಾಯ್ಡುಗೆ ಸಿದ್ದರಾಮಯ್ಯ ಪತ್ರ

ಕರ್ನಾಟಕದ ತೋತಾಪುರಿ ಮಾವಿಗೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ನಿರ್ಬಂಧ ಹೇರಿದ್ದು, ಕೋಲಾರ ಮತ್ತು ಚಿಕ್ಕಬಳ್ಳಾಪುರದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರು: ಕರ್ನಾಟಕದ ತೋತಾಪುರಿ ಮಾವಿಗೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ನಿರ್ಬಂಧ ಹೇರಿದ್ದು, ಕೋಲಾರ ಮತ್ತು ಚಿಕ್ಕಬಳ್ಳಾಪುರದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತೋತಾಪುರಿ ಮಾವಿನ ಬೆಲೆ ಕುಸಿದು ಬಿದ್ದಿದ್ದು, ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆಂಧ್ರಪ್ರದೇಶ ಸರ್ಕಾರದ ನಿರ್ಬಂಧ ಹಿನ್ನೆಲೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಚಿತ್ತೂರು ಜಿಲ್ಲಾಡಳಿತವು ಕರ್ನಾಟಕದ ತೋತಾಪುರಿ ಮಾವು ಖರೀದಿ ಮೇಲೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಬೇಕು ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಗಡಿಭಾಗದ ಮಾವು ಬೆಳೆದ ರೈತರಿಗೆ ತೊಂದರೆ ಉಂಟು ಮಾಡಿದೆ. ಹೀಗಾಗಿ ಈ ನಿರ್ಬಂಧವನ್ನ ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಪತ್ರ ಕೋರಿದ್ದಾರೆ. ಕರ್ನಾಟಕದ ಮಾವು ಬೆಳೆಗಾರರಿಗೆ, ವಿಶೇಷವಾಗಿ ಗಡಿ ಪ್ರದೇಶಗಳಲ್ಲಿ ಗಣನೀಯ ಪ್ರಮಾಣದಲ್ಲಿ ತೋತಾಪುರಿ ಮಾವನ್ನು ಬೆಳೆಯುವವರಿಗೆ ಹೆಚ್ಚಿನ ತೊಂದರೆಯನ್ನುಂಟು ಮಾಡಿದೆ. ಈ ರೈತರು ಉತ್ಪನ್ನಗಳನ್ನು ಮಾರಾಟ ಮಾಡಲು ಚಿತ್ತೂರು ಮೂಲದ ಸಂಸ್ಕರಣಾ ಘಟಕಗಳೊಂದಿಗೆ ದೀರ್ಘಕಾಲದಿಂದ ಸಂಪರ್ಕ ಹೊಂದಿದ್ದಾರೆ. ಪ್ರಸ್ತುತ ನಿರ್ಬಂಧವು ಈ ಸುಸ್ಥಾಪಿತ ಪೂರೈಕೆ ಸರಪಳಿಯನ್ನು ಅಡ್ಡಿಪಡಿಸಿದೆ ಮತ್ತು ಕೊಯ್ಲಿನ ನಂತರದ ಗಮನಾರ್ಹ ನಷ್ಟವನ್ನುಂಟುಮಾಡಿದೆ, ಇದು ಸಾವಿರಾರು ರೈತರ ಜೀವನೋಪಾಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದು ಆಂಧ್ರ ಸಿಎಂಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಇದಕ್ಕೂ ಮುಂಚೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಆಂಧ್ರಪ್ರದೇಶ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಕಳೆದ ಜೂನ್ 7ರಂದು ಚಿತ್ತೂರು ಡಿಸಿ ಅನ್ಯರಾಜ್ಯಗಳ ತೋತಾಪುರಿ ಮಾವು ನಿಷೇಧ ಮಾಡಿದ್ದಾರೆ. ಕರ್ನಾಟಕದ ಗಡಿಯಲ್ಲಿ ಹೆಚ್ಚು ತೋತಾಪುರಿ ಬೆಳೆಯಲಾಗುತ್ತಿದೆ. ಈ ಭಾಗದ ರೈತರಿಗೆ ಚಿತ್ತೂರು ಮಾರುಕಟ್ಟೆ ಮುಖ್ಯ ಪ್ರದೇಶ. ಡಿಸಿ ಅವರ ಈ ನಿರ್ಧಾರ ನೆರೆ ರಾಜ್ಯಗಳ ರೈತರಿಗೆ ಬೆದರಿಕೆಯೊಡ್ಡುವ ರೀತಿ ಇದೆ. ರೈತರಿಗೆ ಆರ್ಥಿಕ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗಬಹುದು.

ಈ ನಡೆಯಿಂದ ಕರ್ನಾಟಕದ ರೈತರು ಆಂಧ್ರಪ್ರದೇಶದ ತರಕಾರಿಗಳನ್ನ ತಡೆಯಬಹುದು ಎಂಬ ಆತಂಕ ಇದೆ. ಹಾಗಾಗಿ, ಸರ್ಕಾರ ಈ ವಿಚಾರದಲ್ಲಿ ತಕ್ಷಣ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಶಾಲಿನಿ‌ ರಜನೀಶ್ ಅವರು ಆಂಧ್ರಪ್ರದೇಶ ಮುಖ್ಯ ಕಾರ್ಯದರ್ಶಿ ಕೆ.‌ವಿಜಯಕುಮಾರ್‌ಗೆ ಮನವಿ ಮಾಡಿದ್ದರು.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker