ಸಿನಿಮಾದೇಶಸುದ್ದಿ

ಹುಟ್ಟುಹಬ್ಬ ದಿನವೇ ಬಾಲಕೃಷ್ಣ ನಟನೆಯ ‘ಅಖಂಡ-2’ ಟೀಸರ್ ಬಿಡುಗಡೆ

ನಟ ನಂದಮೂರಿ ಬಾಲಕೃಷ್ಣ ಇಂದು ಹುಟ್ಟುಹಬ್ಬದ ಹಿನ್ನೆಲೆ ಬಾಲಯ್ಯ ಜನ್ಮದಿನಕ್ಕೆ ಅವರು ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಅಖಂಡ-2’ ಟೀಸರ್ ಬಿಡುಗಡೆ ಮಾಡಲಾಗಿದೆ.

ಟಾಲಿವುಡ್‌ ನಟ ನಂದಮೂರಿ ಬಾಲಕೃಷ್ಣ ಇಂದು ಹುಟ್ಟುಹಬ್ಬದ ಹಿನ್ನೆಲೆ ಬಾಲಯ್ಯ ಜನ್ಮದಿನಕ್ಕೆ ಅವರು ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಅಖಂಡ-2’ ಟೀಸರ್ ಬಿಡುಗಡೆ ಮಾಡಲಾಗಿದೆ. ಹಿಮದಿಂದ ಆವೃತವಾದ ಕೈಲಾಸಂ, ಭರ್ಜರಿ ಆಕ್ಷನ್ಸ್, ಎಸ್ ಥಮನ್ ಮ್ಯೂಸಿಕ್ ‘ಅಖಂಡ-2’ ಟೀಸರ್‌ನ ಹೈಲೆಟ್ಸ್ ಆಗಿದೆ. ಸಾಧು ಗೆಟಪ್‌ನಲ್ಲಿ ಎಂಟ್ರಿ ಕೊಡುವ ಬಾಲಯ್ಯ ದುಷ್ಟರನ್ನು ಸಂಹಾರ ಮಾಡುವ ರೀತಿಯೂ ಅಭಿಮಾನಿಗಳಿಗೆ ಸಖತ್ ಕಿಕ್ ನೀಡುತ್ತದೆ.

ಬಾಲಕೃಷ್ಣ ನಟನೆಯ ಅಖಂಡ ಸಿನಿಮಾ 2021ರಲ್ಲಿ ಬಿಡುಗಡೆ ಆಗಿತ್ತು. ಈ ಚಿತ್ರದಲ್ಲಿ ಬಾಲಯ್ಯ ಅಘೋರಿಯ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅದೇ ಸಿನಿಮಾದ ಎರಡನೇ ಭಾಗವೇ ‘ಅಖಂಡ-2′ ಆಗಿದೆ. ಅಖಂಡ ಸಿನಿಮಾ ನಿರ್ದೇಶನ ಮಾಡಿದ್ದ ಬೊಯಪಾಟಿ ಶ್ರೀನು ಅವರೇ `ಅಖಂಡ-2′ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. `ಅಖಂಡ-2′ ಸಿನಿಮಾದಲ್ಲಿಯೂ ಬಾಲಕೃಷ್ಣ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಬೊಯಪಾಟಿ ಶ್ರೀನು ಹಾಗೂ ಬಾಲಕೃಷ್ಣ ಕಾಂಬಿನೇಷನ್‌ನ ನಾಲ್ಕನೇ ಸಿನಿಮಾ ಇದಾಗಿದೆ. ಈ ಹಿಂದೆ ಬಂದಿದ್ದ ಸಿಂಹ, ಲೆಜೆಂಡ್ ಹಾಗೂ 2021ರಲ್ಲಿ ಬಿಡುಗಡೆ ಆಗಿದ್ದ ಅಖಂಡ ಸಿನಿಮಾಗಳು ಭಾರಿ ಯಶಸ್ಸುಗಳಿಸಿವೆ. ಇದೀಗ `ಅಖಂಡ-2’ರ ನಿರ್ದೇಶನದಲ್ಲಿ ಬೊಯಪಾಟಿ ತೊಡಗಿದ್ದಾರೆ.

ಅಖಂಡ-2 ಸಿನಿಮಾದ ಚಿತ್ರೀಕರಣ ಸದ್ಯ ಜಾರ್ಜಿಯಾದ ಗ್ರ‍್ಯಾಂಡ್ ಲೊಕೇಲ್ಸ್‌ನಲ್ಲಿ ನಡೆಯುತ್ತಿದೆ. ದಸರಾ ವಿಶೇಷ ದಿನವಾದ ಸೆ. 25ರಂದು ಚಿತ್ರ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಬಿಡುಗಡೆಯಾಗಲಿದೆ.

 

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker