
ಮಂಡ್ಯ: ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಹೃತೀಕ್ಷ ಎಂಬ ಮಗು ಬಲಿಯಾಗಿರುವ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಳಿ ನಡೆದಿದೆ. ಮಗಳನ್ನು ಕಳೆದುಕೊಂಡ ದಂಪತಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೊರವನಹಳ್ಳಿಯ ನಿವಾಸಿಗಳಾಗಿದ್ದು, ಹೃತೀಕ್ಷಾಗೆ ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು.
ಈ ವೇಳೆ ಹೆಲ್ಮೆಟ್ ತಪಾಸಣೆಗೆಂದು ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಇದೇ ವೇಳೆ ಬೈಕ್ನಲ್ಲಿದ್ದ ತಂದೆ, ತಾಯಿ ಹಾಗೂ ಮಗು ಆಯಾ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಪರಿಣಾಮ ಮಗಳ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಪರಿಣಾಮ ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಜೀವಬಿಟ್ಟಿದೆ. ಇನ್ನೂ, ಮುದ್ದಾದ ಮಗುವನ್ನು ಕಳೆದುಕೊಂಡು ಪೋಷಕರು ಮಿಮ್ಸ್ ಆಸ್ಪತ್ರೆ ಎದುರು ರಸ್ತೆಯಲ್ಲೇ ಶವವಿಟ್ಟು ಅಳುತ್ತಿದ್ದಾರೆ. ಪೊಲೀಸರ ನಡೆಗೆ ಸಾರ್ವಜನಿಕರ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇನ್ನು ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಪೊಲೀಸರ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಗುವನ್ನು ಕಳೆದುಕೊಂಡ ಪೋಷಕರು ಆಕ್ರಂದನ ಮುಗಿಲುಮುಟ್ಟಿದೆ.