
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಸ್ವಯಂಪ್ರೇತ ದೂರು ದಾಖಲಿಸಿಕೊಂಡಿದೆ. ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ್ದು, ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಿಗದಿಪಡಿಸಿದೆ. ಪತ್ರಿಕೆಗಳಲ್ಲಿ ಬಂದ ವರದಿ ಆಧರಿಸಿ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಳ್ಳಲಾಗಿದೆ. ಬುಧವಾರ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಘಟನೆ ತೀವ್ರ ಕಳವಳಕಾರಿಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಪೀಠ ಹೇಳಿದೆ.