ಕರ್ನಾಟಕHomeಕ್ರೀಡೆಜಿಲ್ಲೆದೇಶಸಿನಿಮಾಸುದ್ದಿ

ಚಿನ್ನಸ್ವಾಮಿ ಕಾಲ್ತುಳಿತ: ಕಾಣೆಯಾದ ರಮ್ಯಾ ಹಾಕಿರುವ ಇನ್​ಸ್ಟಾಗ್ರಾಮ್ ಸ್ಟೇಟಸ್!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್​ಸಿಬಿ ಐಪಿಎಲ್ ಕಪ್ ಗೆದ್ದ ವೇಳೆ ನಡೆಸಿದ ಸಂಭ್ರಮಾಚರಣೆಯಲ್ಲಿ 11 ಮುಗ್ಧ ಜನರು ಪ್ರಾಣ ಕಳೆದುಕೊಂಡರು. ಈ ಘಟನೆಗೆ ನಟಿ ರಮ್ಯಾ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಅಧಿಕಾರಿಗಳ ಸಾಮೂಹಿಕ ವೈಫಲ್ಯ ಮತ್ತು ಯೋಜನೆಯ ಕೊರತೆಯೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ಕಾಲ್ತುಳಿತ ಸಂಭವಿಸಿ 11 ಜನರು ಮೃತಪಟ್ಟಿದ್ದಾರೆ. ಈ ಘಟನೆಯ ಬಗ್ಗೆ ಇನ್‌ಸ್ಟಾಗ್ರಾಮ್ ಸ್ಟೇಟಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದ ರಮ್ಯಾ, ಸರ್ಕಾರ, ಪೊಲೀಸರು, ಕೆಎಸ್‌ಸಿಎ, ಆರ್‌ಸಿಬಿ ಮತ್ತು ಸಾರ್ವಜನಿಕರ ಸಾಮೂಹಿಕ ವೈಫಲ್ಯವೇ ಈ ದುರಂತಕ್ಕೆ ಕಾರಣ ಎಂದು ಟೀಕಿಸಿದ್ದಾರೆ. ಆದರೆ, ಈ ಸ್ಟೇಟಸ್ ಈಗ ಇನ್‌ಸ್ಟಾಗ್ರಾಮ್‌ನಿಂದ ಕಾಣೆಯಾಗಿದ್ದು, ಅದು ಸ್ವಯಂಚಾಲಿತವಾಗಿ ಡಿಲೀಟ್ ಆಗಿರಬಹುದು ಅಥವಾ ರಮ್ಯಾ ಅವರೇ ತೆಗೆದಿರಬಹುದು ಎಂಬ ಪ್ರಶ್ನೆ ಮೂಡಿದೆ.

ಆರ್‌ಸಿಬಿ ಗೆದ್ದ ರಾತ್ರಿ ಕರ್ನಾಟಕದಾದ್ಯಂತ ಸಂಭ್ರಮಾಚರಣೆಗಳು ನಡೆದವು. ಮಾಲ್‌ಗಳಲ್ಲಿ ಮತ್ತು ಬೀದಿಗಳಲ್ಲಿ ಜನರು ಖುಷಿಯಿಂದ ಕುಣಿದರು. ಆಗ ಒಂದೇ ಒಂದು ಅಹಿತಕರ ಘಟನೆಯೂ ನಡೆದಿಲ್ಲ. ಕಾಲ್ತುಳಿತಗಳು ಸುಮ್ಮನೆ ಸಂಭವಿಸುವುದಿಲ್ಲ, ಅವುಗಳನ್ನು ಸೃಷ್ಟಿ ಮಾಡಲಾಗುತ್ತದೆ. ಸರ್ಕಾರ, ಅಧಿಕಾರಿಗಳು, ಆರ್​ಸಿಬಿ, ಪೊಲೀಸರು, ಕೆಎಸ್‌ಸಿಎ ಮತ್ತು ಸಾರ್ವಜನಿಕರ ಸಾಮೂಹಿಕ ವೈಫಲ್ಯದಿಂದ ಈ ಕಾಲ್ತುಳಿತ ನಡೆದಿದೆ’ ಎಂದು ರಮ್ಯಾ ಹೇಳಿದ್ದಾರೆ.

‘ಕ್ರೀಡೆಯ ಗೆಲುವನ್ನು ಆಚರಿಸಲು ಬಂದ ಮುಗ್ಧರು ಮೃತಪಟ್ಟಿದ್ದಾರೆ. ಈ ಸಾವಿಗೆ ಕಾರಣಗಳನ್ನು ಕಂಡುಹಿಡಿಯಲು ಮತ್ತು ನ್ಯಾಯ ಒದಗಿಸಲು ಪ್ರಾಮಾಣಿಕ ಆತ್ಮಾವಲೋಕನದ ಅಗತ್ಯವಿದೆ. ಇಲ್ಲಿ ಅಧಿಕಾರಿಗಳನ್ನು ಅಮಾನತುಗೊಳಿಸಿರುವ ನಿರ್ಧಾರವು ಯೋಚಿಸದೇ ತೆಗೆದುಕೊಂಡ ನಿರ್ಧಾರದಂತೆ ಕಾಣುತ್ತದೆ. ಈ ನಿರ್ಧಾರ ತೆಗೆದುಕೊಳ್ಳುವ ಮೊದಲು ವರದಿಗಾಗಿ ಕಾಯಬೇಕಿತ್ತು’ ಎಂದು ರಮ್ಯಾ ಅಭಿಪ್ರಾಯ ಹೊರಹಾಕಿದ್ದಾರೆ.

ಅಲ್ಲಿ ಬಂದ ಎಲ್ಲರಿಗೂ ಒಳ್ಳೆಯ ಉದ್ದೇಶವೇ ಇತ್ತು. ಆದರೆ, ಯೋಜನೆ ಇಲ್ಲದೆ, ಸಮನ್ವಯದ ಕೊರತೆಯಿಂದ ಈ ರೀತಿ ಆಯಿತು. ಆಟಗಾರನ್ನು ಒಂದೇ ಸ್ಥಳದಲ್ಲಿ ಸೇರಿಸುವ ಬದಲು ತೆರೆದ ಬಸ್​ನಲ್ಲಿ ರ್ಯಾಲಿ ಮಾಡಿದ್ದರೆ ಭಯಾನಕ ಘಟನೆಯನ್ನು ತಪ್ಪಿಸಬಹುದಿತ್ತು’ ಎಂದು ರಮ್ಯಾ ಹೇಳಿದ್ದಾರೆ. ಈಗ ಅವರು ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಕಾಲ್ತುಳಿತದ ಬಗ್ಗೆ ಹಾಗೂ ಅಧಿಕಾರಿಗಳ ತಲೆದಂಡದ ಬಗ್ಗೆ ಪೋಸ್ಟ್ ಮಾಡಿದ್ದರು. ಆದರೆ, ಅದು ಈಗ ಮಾಯವಾಗಿದೆ. ಸಾಮಾನ್ಯವಾಗಿ ಇನ್​ಸ್ಟಾಗ್ರಾಮ್ ಸ್ಟೇಟಸ್ 24 ಗಂಟೆ ಬಳಿಕ ಡಿಲೀಟ್ ಆಗುತ್ತದೆ. ಆದರೆ, ಇದು ಆಟೋಮ್ಯಾಟಿಕ್ ಆಗಿ ಡಿಲೀಟ್ ಆಗಿದ್ದೋ ಅಥವಾ ಅವರೇ ಡಿಲೀಟ್ ಮಾಡಿದ್ದೋ ಎನ್ನುವ ಪ್ರಶ್ನೆ ಮೂಡಿದೆ.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker