
ಬೆಂಗಳೂರು: ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್ 2025ರ ಫೈನಲ್ ಪಂದ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ನಾಲ್ಕನೇ ಬಾರಿಗೆ RCB ತಂಡ ಫಿನಾಲೆ ತಲುಪಿದ್ದು, ಆರ್ಸಿಬಿ ಗೆಲುವಿಗಾಗಿ ಶುಭಷಯಗಳ ಮಹಾಪೂರವೇ ಹರಿದು ಬರುತ್ತಿದೆ. ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಗೆಲ್ಲಲಿ ಎಂದು ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ..
ತಾಳ್ಮೆಯ ಫಲ ಸಿಹಿಯಾಗಿರುತ್ತದೆ ಆರ್ಸಿಬಿ ಈ ಭಾರಿ ಕಪ್ ಗೆಲ್ಲಲಿ ಎಂದು ಆರೈಸಿದ್ದಾರೆ. ಇಂದು ನಡೆಯುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಚೊಚ್ಚಲ ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ. ಎರಡೂ ತಂಡಗಳು ಕಳೆದ 17 ವರ್ಷಗಳಿಂದ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆದ್ದಿಲ್ಲ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಬಹಳ ಮುಖ್ಯವಾಗಿದೆ.
ಆರ್ಸಿಬಿ ಫೈನಲ್ ಪಂದ್ಯಕ್ಕೂ ಮುನ್ನ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ಟ್ವಿಟ್ ಮಾಡಿ ಶುಭಕೋರಿದ್ದಾರೆ. ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್ಸಿಬಿ ತಂಡಕ್ಕೆ ಶುಭ ಹಾರೈಕೆಗಳು. ಆರ್ಸಿಬಿ ತಂಡದ ಸೋಲು-ಗೆಲುವು, ಏಳು-ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ-ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ. ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿ ಶುಭಕೋರಿದ್ದಾರೆ. ಇಂದು ಬೆಳಿಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಆರ್ಸಿಬಿ ಜರ್ಸಿ ತೊಟ್ಟು, ವಿಡಿಯೋ ಮಾಡಿ ಶುಭಕೋರಿದ್ದರು.