ಕರ್ನಾಟಕHomeಜಿಲ್ಲೆದೇಶಸುದ್ದಿ

ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ತಲೆದಂಡ

ಕಾಲ್ತುಳಿತ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಎಲ್​ಸಿ ಗೋವಿಂದ್​ ರಾಜುರನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲಾಗಿದ್ದು.

ಬೆಂಗಳೂರು: ಕಾಲ್ತುಳಿತ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಎಲ್​ಸಿ ಗೋವಿಂದ್​ ರಾಜುರನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲಾಗಿದ್ದು. ವಿಧಾನಸೌದ ಮುಂಭಾಗ ತರಾತುರಿಯಲ್ಲಿ ಕಾರ್ಯಕ್ರಮ ಮಾಡುವುದರಿಂದ ಹಿಂದೆ ಗೋವಿಂದ್​ರಾಜು ಪಾತ್ರವಿತ್ತು ಎಂದು ತಿಳಿದು ಬಂದಿದೆ.

ಹಾಲಿ ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಗೋವಿಂದರಾಜು , ತರಾತುರಿಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಕೆಲ ಸಚಿವರು ಗರಂ ಆಗಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಗೋವಿಂದರಾಜು ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜುಗೆ ಗೇಟ್ ಪಾಸ್ ನೀಡಲಾಗಿದೆ

ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.

ಗೋವಿಂದರಾಜ್ ಅವರು ಜೂನ್‌ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್‌ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್‌ ಎಂಬ ಆರೋಪ ಈಗ ಕೇಳಿ ಬಂದಿದೆ.

ಜೂನ್‌ 4ರ ಬೆಳಗ್ಗೆ ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರು ಪೊಲೀಸ್‌ ಆಯುಕ್ತರಿಗೆ ಕರೆ ಮಾಡಿ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಬೇಕು ಎಂದು ಒತ್ತಡ ಹಾಕುತ್ತಾರೆ. ಇದಕ್ಕೆ ಆಯುಕ್ತರು, ಬೆಳಗ್ಗೆಯವರೆಗೆ ಪೊಲೀಸರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಎರಡು ಮೂರು ಕಡೆ ಕಾರ್ಯಕ್ರಮ ಮಾಡಿದರೆ ಭದ್ರತೆ ನೀಡಲು ಕಷ್ಟವಾಗುತ್ತದೆ. ಒಂದು ಕಡೆ ಕಾರ್ಯಕ್ರಮ ಮಾಡಿದರೆ ಬಂದೋಬಸ್ತ್‌ ಕಲ್ಪಿಸಲು ಸಾಧ್ಯವಾಗುತ್ತದೆ. ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ.

ಆಯುಕ್ತರ ಪ್ರತಿಕ್ರಿಯೆ ಬಳಿಕ ಗೋವಿಂದರಾಜ್‌ ಅವರು ಸಿಎಂ ಬಳಿಗೆ ಹೋಗುತ್ತಾರೆ. ಸಿಎಂ ಅವರು ಆಯುಕ್ತರನ್ನು ಕರೆಸಿ, ನಾನು ಈ ರಾಜ್ಯದ ಸಿಎಂ. ಆದೇಶ ಮಾಡುತ್ತಿದ್ದೇನೆ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ಕೊಡಿ ಎಂದು ಸೂಚಿಸುತ್ತಾರೆ. ಅನಿವಾರ್ಯವಾಗಿ ಪೊಲೀಸ್ ಕಮಿಷನರ್ ವಿಧಾನಸೌಧಕ್ಕೆ ಬಿಗಿ ಭದ್ರತೆ ಹಾಕುತ್ತಾರೆ.ಕಾಟಾಚಾರಕ್ಕೆ ಮೂರ್ನಾಲ್ಕು ತುಕಡಿ ಭದ್ರತೆ ಹಾಕಿರುತ್ತಾರೆ. ವಿಧಾನಸೌಧದಲ್ಲೇ ಕಾರ್ಯಕ್ರಮ ಮಾಡಬೇಕು, ನಾನು ಚಿನ್ನಸ್ವಾಮಿಗೆ ಹೋಗುವುದಿಲ್ಲ ಎಂದು ಸಿಎಂ ಹೇಳಿದ್ದರಿಂದ ಹೆಚ್ಚಿನ ಸಂಖ್ಯೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಗಂಭೀರವಾದ ಆರೋಪ ಮಾಡಿದ್ದರು.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker