
ಬಳ್ಳಾರಿ: ಲಾರಿ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಸಂಡೂರಿನ ಬಳಿ ನಡೆದಿದೆ. ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ. ಮೃತರ ಗುರುತು ಪತ್ತೆ ಆಗಿಲ್ಲ. ಇನ್ನು ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.