
ಅಹ್ಮದಾಬಾದ್: ಅಹ್ಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ನಿಧನರಾಗಿದ್ದಾರೆ. ವಿಜಯ್ ರುಪಾನಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ AI 171 ನಲ್ಲಿ 12 ನೇ ಪ್ರಯಾಣಿಕರಾಗಿ ಟಿಕೆಟ್ ಕಾಯ್ದಿರಿಸಿದ್ದರು. ವಿಮಾನ ಪ್ರಯಾಣಿಕರ ವಿವರದಲ್ಲಿ ವಿಜಯ್ ರುಪಾನಿ ಈ ವಿಮಾನ ಹತ್ತಿದ್ದರು.
ಲಂಡನ್‌ಗೆ ಪ್ರಯಾಣಿಸುತ್ತಿದ್ದ ವಿಜಯ್ ರೂಪಾನಿ 12ನೇ ಸೀಟಿನಲ್ಲಿ ಕುಳಿತುಕೊಂಡಿದ್ದರು. ಲಂಡನ್‌ನಲ್ಲಿರುವ ಮಗಳ ಮನೆಗೆ ತೆರಳಲು ರೂಪಾನಿ ವಿಮಾನ ಹತ್ತಿದ್ದರು. ಇಬ್ಬರು ಪೈಲಟ್, 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈಗಾಗಲೇ 130ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆ ಆಗುತ್ತಿದೆ.
ವಿಜಯ್ ರೂಪಾನಿ
ವಿಜಯ್ ರೂಪಾನಿ ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, ಅವರು ಆಗಸ್ಟ್ 2016 ರಿಂದ ಸೆಪ್ಟೆಂಬರ್ 2021 ರವರೆಗೆ ಗುಜರಾತ್‌ನ 16 ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.