
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕಳೆದ 17 ವರ್ಷಗಳಿಂದ ಐಪಿಎಲ್ ಆಡುತ್ತಿರುವ ಉಭಯ ತಂಡಗಳು ಈವರೆಗೆ ಟ್ರೋಫಿ ಮುಡಿಗೇರಿಸಿಕೊಂಡಿಲ್ಲ. ಹೀಗಾಗಿಯೇ ಎರಡೂ ತಂಡಗಳ ಅಭಿಮಾನಿಗಳು ದೀರ್ಘಕಾಲದ ಕಾಯುವಿಕೆಯನ್ನು ಕೊನೆಗೊಳಿಸಲು ಕಾತುರದಿಂದ ಕಾಯುತ್ತಿದ್ದಾರೆ.
ಈ ಬಾರಿ ನಡೆಯುತ್ತಿರುವುದು 18ನೇ ಸೀಸನ್ನ ಐಪಿಎಲ್. ವಿರಾಟ್ ಕೊಹ್ಲಿಯ ಜೆರ್ಸಿ ನಂಬರ್ 18. ಅಲ್ಲದೆ ಕೊಹ್ಲಿ ಆರ್ಸಿಬಿ ಪರ ಕಣಕ್ಕಿಳಿಯಲಾರಂಭಿಸಿ 18 ವರ್ಷಗಳಾಗಿವೆ. ಅತ್ತ ಆರ್ಸಿಬಿ ಅಭಿಮಾನಿಗಳ ಕಪ್ ಗೆಲ್ಲುವ ಕಾಯುವಿಕೆ ಕೂಡ 18ನೇ ವರ್ಷಕ್ಕೆ ಕಾಲಿಟ್ಟಿದೆ… ಈ ಎಲ್ಲಾ ಸಂಖ್ಯೆಗಳು 18 ಆಗಿರುವುದರಿಂದ ಈ ಸಲ ಕಪ್ ನಮ್ದೆ ಎನುತ್ತಿದ್ದಾರೆ ಆರ್ಸಿಬಿ ಅಭಿಮಾನಿಗಳು. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಪಂದ್ಯವು ರಾತ್ರಿ 7.30 ಕ್ಕೆ ಶುರುವಾಗಲಿದೆ.