
ಹೈದರಾಬಾದ್: ಕನ್ನಡ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಜನಪ್ರಿಯ ಗಾಯಕಿಯಾಗಿರುವ ಮಂಗ್ಲಿಯ ಹುಟ್ಟುಹಬ್ಬದ ಪಾರ್ಟಿಯ ಮೇಲೆ ತೆಲಂಗಾಣ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿದ್ದಾರೆ. ಈ ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದ್ದು, ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ತಾಲೂಕಿನ ಎರ್ಲಪಲ್ಲಿಯಲ್ಲಿನ ರೆಸಾರ್ಟ್ನಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು.
ಈ ವೇಳೆ ಗಾಂಜಾ, ವಿದೇಶಿ ಮದ್ಯ ಪತ್ತೆ ಆಗಿದೆ. ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆ ವೇಳೆ 8 ಮಂದಿ ಮಾದಕ ದ್ರವ್ಯ ಸೇವಿಸಿರೋದು ಪತ್ತೆ ಆಗಿದೆ. ದಾಳಿಯ ವೇಳೆ ಪೊಲೀಸರು ವಿಡಿಯೋ ರೆಕಾರ್ಡ್ ಮಾಡಿದ್ದು, ಇದನ್ನು ನೋಡಿದ ಮಂಗ್ಲಿ ಪೊಲೀಸರ ಕರ್ತವ್ಯ ಅಡ್ಡಿಪಡಿಸಿದ್ದಾರೆ ಎನ್ನಲಾಗುತ್ತಿದೆ. ವಿಡಿಯೋ ಮಾಡದಂತೆ ಪೊಲೀಸರಿಗೆ ಆವಾಜ್ ಹಾಕಿದ್ದಾರೆ. ಈ ಸಂಬಂಧ ಪೊಲೀಸರು ಮಂಗ್ಲಿ ಮತ್ತು ರೆಸಾರ್ಟ್ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.