
ಮುಂಬೈ: ಚಲಿಸುತ್ತಿದ್ದ ರೈಲಿನಿಂದ 10ಕ್ಕೂ ಅಧಿಕ ಪ್ರಯಾಣಿಕರು ಕೆಳಗೆ ಬಿದ್ದಿದ್ದು, ಐದಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮುಂಬ್ರಾದಲ್ಲಿ ನಡೆದಿದೆ. ಥಾಣೆ ಜಿಲ್ಲೆಯ ಮುಂಬ್ರಾ ಮತ್ತು ದಿವಾ ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ. ರೈಲಿನಲ್ಲಿ ಅತಿಯಾದ ಜನಸಂದಣಿಯಿಂದಾಗಿ ಅಪಘಾತ ಸಂಭವಿಸಿದೆ.
ಪ್ರಾಥಮಿಕ ವರದಿ ಪ್ರಕಾರ, ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಕಿಕ್ಕಿರಿದು ತುಂಬಿತ್ತು. ರೈಲಿನ ಬಾಗಿಲು ಬಳಿ ಪ್ರಯಾಣಿಕರು ಜೋತು ನಿಂತಿದ್ದರು. ಈ ವೇಳೆ ಕೆಲವು ಪ್ರಯಾಣಿಕರು ನೆಲಕ್ಕುರುಳಿ ಬಿದ್ದಿದ್ದಾರೆ. ಇದರಿಂದ ಐದು ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಇನ್ನು, ಗಾಯಗೊಂಡವರನ್ನು ಕಲ್ವಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.