
ಮಂಗಳೂರು: ದುಷ್ಕರ್ಮಿಗಳ ತಂಡವೊಂದು ಇಬ್ಬರ ಮೇಲೆ ತಲವಾರು ದಾಳಿ ನಡೆಸಿ, ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪಿಕಪ್ ವಾಹನ ಚಾಲಕನನ್ನು ಕೊಲೆ ಮಾಡಲಾಗಿದೆ.
ಅಬ್ದುಲ್ ರಹೀಂ ಮೃತ ದುರ್ದೈವಿ. ಮರಳು ಅನ್ಲೋಡ್ ಮಾಡುವಾಗ ಹನೀಫ್ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಇದೇ ವೇಳೆ ಇಮ್ತಿಯಾಜ್ ಜೊತೆಗಿದ್ದ ಕಲಂದರ್ ಎಂಬುವರ ಮೇಲೂ ದಾಳಿ ಮಾಡಲಾಗಿದ್ದು, ಗಾಯಗೊಂಡಿದ್ದಾರೆ. ಬೈಕ್ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.