ಸುದ್ದಿದೇಶ

ಅಹಮದಾಬಾದ್‌ ಏರ್‌ಪೋರ್ಟ್‌ ಬಳಿ ವಿಮಾನ ಪತನ

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ ಪತನಗೊಂಡಿದೆ

ಅಹಮದಾಬಾದ್:‌ ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ ಪತನಗೊಂಡ ಘಟನೆ ಅಹಮದಾಬಾದ್‌ನ ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ.

ಈ ವಿಮಾನ ನಿಲ್ದಾಣದ ಆವರಣದಿಂದ ದಟ್ಟ ಹೊಗೆ ಹೊರಬರುತ್ತಿರುವುದನ್ನು ನೋಡಬಹುದು. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಹಲವಾರು ಸಾವುನೋವುಗಳ ಭೀತಿ ಎದುರಾಗಿದೆ. ಆದರೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಇಂದು ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಅಹಮದಾಬಾದ್​ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿತ್ತು. ವಿಮಾನದೊಳಗಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker