
ಪ್ರಧಾನಿ ನರೇಂದ್ರ ಮೋದಿ ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.. ಪಹಲ್ಗಾಮ್ ದಾಳಿಯ ಬಳಿಕ ಮೊದಲ ಬಾರಿಗೆ ಭೇಟಿ ನೀಡಲಿದ್ದು, ಪ್ರಮುಖ ಮೂಲಸೌಕರ್ಯ ಉದ್ಘಾಟನೆಗಳು ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಪ್ರಮುಖವಾಗಿ ಇಲ್ಲಿನ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಈ ಸೇತುವೆ ಐಫೆಲ್ ಟವರ್‌ಗಿಂತ ಎತ್ತರವಾಗಿದ್ದು, ಭಾರತದ ಎಂಜಿನಿಯರಿಂಗ್ ಕೌಶಲ್ಯದ ಸಂಕೇತವೆಂದು ಪರಿಗಣಿಸಲಾಗಿದೆ.
ಇದನ್ನು ನಿರ್ಮಿಸಲು ಸುಮಾರು 1500 ಕೋಟಿ ರೂ. ವೆಚ್ಚವಾಗಿದೆ. ಇದರ ನಂತರ, ಅವರು ದೇಶದ ಮೊದಲ ಕೇಬಲ್-ಸ್ಟೇ ರೈಲು ಸೇತುವೆಯಾದ ಅಂಜಿ ರೈಲು ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ, ಪ್ರಧಾನಿ ಮೋದಿ ಅವರು ಕತ್ರಾದಿಂದ ಶ್ರೀನಗರಕ್ಕೆ ಎರಡು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.