
ವಡೋದರ: ಪ್ರಧಾನಿ ನರೇಂದ್ರ ಮೋದಿ ಇಂದು ವಡೋದರಾದಲ್ಲಿ ರೋಡ್ ಶೋ ನಡೆಸಿದ್ದಾರೆ.. ರೋಡ್ ಶೋನಲ್ಲಿ ಆಫ್ರಿಕಾದ ವಿದ್ಯಾರ್ಥಿಗಳು ಕೂಡ ಪಾಲ್ಗೊಂಡಿದ್ದರು. ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಿ ಎನ್ನುವ ಬ್ಯಾನರ್ಗಳನ್ನು ಹಿಡಿದಿದ್ದರು.
ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ನ ವಡೋದರಾದಲ್ಲಿ ರೋಡ್ ಶೋ ನಡೆಸಿದ್ದು, ಕರ್ನಲ್ ಖುರೇಷಿ ಕುಟುಂಬವೂ ಕೂಡ ಭಾಗಿಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಮೇಲೆ ಹೂವಿನ ಸುರಿಮಳೆಗೈದಿದ್ದರು.
ಆಪರೇಷನ್ ಸಿಂದೂರ್ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ತವರು ರಾಜ್ಯ ಗುಜರಾತ್ ಗೆ ಭೇಟಿ ನೀಡಿದ್ದಾರೆ. ಎರಡು ದಿನಗಳ ಗುಜರಾತ್ ಪ್ರವಾಸ ಆರಂಭಿಸಿದ್ದು, ವಡೋದರಾದಲ್ಲಿ ಬೆಳಗ್ಗೆ ರೋಡ್ ಶೋ ನಡೆಸಿದ್ದಾರೆ.
ಪ್ರಧಾನಿ ಮೋದಿ 82,000 ಕೋಟಿ ರೂ. ಮೌಲ್ಯದ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ಉದ್ಟಾಟಿಸಲಿದ್ದಾರೆ.. ಪ್ರಧಾನ ಮಂತ್ರಿಯವರು ಮೊದಲು ದಾಹೋದ್ಗೆ ಭೇಟಿ ನೀಡಿದರು. ಅಲ್ಲಿ ಲೋಕೋ ಮ್ಯಾನುಫ್ಯಾಕ್ಚರಿಂಗ್ ಶಾಪ್-ರೊಲಿಂಗ್ ಸ್ಟಾಕ್ ಕಾರ್ಯಾಗಾರವನ್ನು ಉದ್ಟಾಟಿಸಿದರು.