HomeUncategorizedಕರ್ನಾಟಕಜಿಲ್ಲೆತುಮಕೂರುದೇಶಸುದ್ದಿ

ಹೇಮಾವತಿ ಕೆನಾಲ್‌ ಲಿಂಕ್‌ ಕಾಮಗಾರಿ ವಿರೋಧಿಸಿ ಪ್ರೊಟೆಸ್ಟ್‌

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ವಿವಾದ ಭುಗಿಲೆದ್ದು, ವಿರೋಧದ ನಡುವೆಯೂ ಹೇಮಾವತಿ ಕೆನಾಲ್ ಲಿಂಕ್‌ ಕಾಮಗಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ.

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ವಿವಾದ ಭುಗಿಲೆದ್ದು, ವಿರೋಧದ ನಡುವೆಯೂ ಹೇಮಾವತಿ ಕೆನಾಲ್ ಲಿಂಕ್‌ ಕಾಮಗಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಸರ್ಕಾರವು ವಿವಾದ ಬಗೆಹರಿಸದೇ ಕಾಮಗಾರಿ ಮುಂದುವರೆಸಲು ಮುಂದಾಗಿದ್ದು, ಪ್ರತಿಭಟನೆಗೆ ಅವಕಾಶವಿಲ್ಲದಂತೆ ನಿಷೇಧಾಜ್ಞೆ ಹೇರಲಾಗಿದೆ. ಗುಬ್ಬಿ ತಾಲ್ಲೂಕಿನ ನಿಟ್ಟೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, 144 ಸೆಕ್ಷನ್ ಜಾರಿಯ ನಡುವೆಯೂ ರೈತ ಸಂಘಟನೆ ಹಾಗೂ ಬಿಜೆಪಿ ನಾಯಕರು ಹೋರಾಟ ನಡೆಸುತ್ತಿದ್ದಾರೆ. ಗುಬ್ಬಿ, ನಿಟ್ಟೂರು ಸೇರಿದಂತೆ ಹಲವೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ನಿಯೋಜಿಸಲಾಗಿದೆ. 10 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, 4 ಡಿವೈಎಸ್‌ಪಿ, 23 ಇನ್ಸ್‌ಪೆಕ್ಟರ್‌ ಸಹಿತ 900 ಪೊಲೀಸರ ನಿಯೋಜನೆ ಮಾಡಲಾಗಿದೆ.

ಕೆನಾಲ್‌ ಯೋಜನೆ ಮೂಲಕ ರಾಮನಗರಕ್ಕೆ ನೀರು ಹರಿಸಲು ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಗುಬ್ಬಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನ ಹೊತ್ತೊಯ್ಯಲು ತಂದಿದ್ದ ಸಾರಿಗೆ ಬಸ್‌ ಚಕ್ರಗಳ ಗಾಳಿ ತೆಗೆದು ಆಕ್ರೋಶ ಹೊರಹಾಕಿದ್ದಾರೆ. ಬಸ್ಸನ್ನ ಮಗುಚಿಹಾಕಲೂ ಯತ್ನಿಸಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗೆ-ಬೆಂಗಳೂರು ಹೆದ್ದಾರಿಯಲ್ಲಿ ನಡೆದುಕೊಂಡೇ ನಾಲೆಯತ್ತ ಹೊರಟಿದ್ದಾರೆ. ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿರೋಧಿಸಿ ಪ್ರತಿಭಟನೆಗೂ ಮುನ್ನವೇ ಪ್ರತಿಭಟನಾಕಾರರನ್ನ ವಶಕ್ಕೆ ಪಡೆಯುವ ಕೆಲಸ ಪೊಲೀಸರು ಮಾಡಿದ್ದಾರೆ. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ 10ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಗುಬ್ಬಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker