
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಕಳೆದ 18 ವರ್ಷಗಳಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿತು. ಮಧ್ಯರಾತ್ರಿ ಬೆಂಗಳೂರಿನಾದ್ಯಂತ ಅಭಿಮಾನಿಗಳು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ಆರ್ಸಿಬಿಯ ಬೆಂಗಳೂರಿನ ಅಭಿಮಾನಿಗಳಿಗೆ ಸಿಹಿ ಸುದ್ದಿ. 18 ವರ್ಷಗಳ ಕನಸು ನನಸಾದ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನಲ್ಲಿಆರ್ಸಿಬಿಯ ವಿಕ್ಟರಿ ಪರೇಡ್ ನಡೆಯಲಿದೆ. ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಆರಂಭಗೊಳ್ಳಲಿದ್ದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಯಾಗಲಿದೆ. ಈ ಬಗ್ಗೆ ಶೀಘ್ರವೇ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಆರ್ಸಿಬಿ ತಿಳಿಸಿದೆ.