ಸುದ್ದಿHomeಕರ್ನಾಟಕಜಿಲ್ಲೆದೇಶ

ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಾರ: ತಡರಾತ್ರಿ ಅಧಿಕಾರ ಸ್ವೀಕರಿಸಿದ ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಬೆಂಗಳೂರು: ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. 1996 ಬ್ಯಾಚ್ ನ ಐಪಿಎಸ್ ಅಧಿಕಾರಿ, ಬಿಹಾರ ಮೂಲದವರಾಗಿರುವ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್​ ಕಮಿಷನರ್​ ನೇಮಕ ಮಾಡಿ ರಾಜ್ಯ ಆದೇಶ ಹೊರಡಿಸಿದೆ. ಬೆಂಗಳೂರು ಅಡಿಷನಲ್‌ ಕಮಿಷನರ್, ಸೆಂಟ್ರಲ್ ರೇಂಜ್ ಐಜಿಯಾಗಿ ಕಾರ್ಯ ನಿರ್ವಹಿಸಿದ್ದರು. ಈಗ 39 ನೇ ಬೆಂಗಳೂರು ಪೊಲೀಸ್ ಆಯುಕ್ತರಾಗಿ ನಿಯುಕ್ತಿಗೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿದ್ದು, ಈ​ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

Lavanya

ಸಮ್ರಾಟ್‌ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker