
ಬೆಂಗಳೂರು: ಕೇಂದ್ರ ಗೃಹ ಸಚಿವಾಲಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದು, ಈ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ ಕ್ಕೆ ವಹಿಸಿ ಆದೇಶ ಹೊರಡಿಸಿದೆ.
ಕಳೆದ ಮೇ 1ರಂದು ಮಂಗಳೂರು ಹೊರವಲಯದ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ಈವರೆಗೆ 11 ಜನರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ ಪೋಷಕರು, ಹಿಂದೂ ಸಂಘಟನೆಗಳು ಈ ಪ್ರಕರಣವನ್ನು NIAಗೆ ನೀಡುವಂತೆ ಒತ್ತಾಯಿಸಿದ್ದರು. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತನಿಖೆಯನ್ನು NIAಗೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಒತ್ತಾಯಕ್ಕೆ ಮಣಿದಿರುವ ಕೇಂದ್ರ ಗೃಹ ಇಲಾಖೆ ಸುಹಾಸ್ ಶೆಟ್ಟಿ ಪ್ರಕರಣವನ್ನು NIAಗೆ ವಹಿಸಿದೆ.