
ಬೆಂಗಳೂರು: ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಎಂ.ಚಿನ್ನಸ್ವಾಮಿ ಮೈದಾನದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣದ ನೈತಿಕ ಹೊಣೆ ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಎ.ಶಂಕರ್ ಮತ್ತು ಖಜಾಂಚಿ ಇ.ಎಸ್.ಜೈರಾಮ್ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
ಪದಾಧಿಕಾರಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಶಂಕರ್, ಜೈರಾಮ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಪದಾಧಿಕಾರಿಗಳ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದಾರೆ. ಹೈಕೋರ್ಟ್ ರಿಲೀಫ್ ಕೊಟ್ಟ ನಂತರ ಅಧ್ಯಕ್ಷ ಬ್ರಿಜೇಶ್ ಪಾಟೀಲ್ ಸಭೆ ನಡೆಸಿ ರಾಜೀನಾಮೆಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ತೆರವುಗೊಂಡ ಸ್ಥಾನಕ್ಕೆ ತಾತ್ಕಲಿಕವಾಗಿ ಜಂಟಿ ಕಾರ್ಯದರ್ಶಿ ಶಾವೀರ್ ತಾರಪೂರ್ ಅವರನ್ನು ನೇಮಕ ಮಾಡಲಾಗಿದೆ.