ಹವಮಾನ ಇಲಾಖೆಯಿಂದ ರಾಜ್ಯದಲ್ಲಿ 5 ದಿನ ಮಳೆಯಾಗುವ ಮುನ್ಸೂಚನೆ
ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ 5 ದಿನಗಳ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ..

ಬೆಂಗಳೂರು: ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ 5 ದಿನಗಳ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.. ಮೇ 26ರ ರವರಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಮೇತ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ..
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40 – 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ. ಆದ್ರೆ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗೋ ಸಾಧ್ಯತೆ ಇದೆ. ಹೀಗಾಗಿ ಈ ಮೇಲಿನ ಜಿಲ್ಲೆಗಳಿಗೆ ಇಂದಿನಿಂದ ಮೆ.26ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ..